ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 1,169 ಮಂದಿ ಗುಣಮುಖ

ಮನೆಯಲ್ಲೇ ಐಸೊಲೇಷನ್‌ ಆಗಿರುವ 5,352 ಮಂದಿ
Last Updated 7 ಅಕ್ಟೋಬರ್ 2020, 1:28 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಒಂದೇ ದಿನ 1,169 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಇದೇ ವೇಳೆ 373 ಹೊಸ ಪ್ರಕರಣಗಳು ವರದಿಯಾಗಿವೆ.

ಒಟ್ಟು ಸೋಂಕಿತರ ಸಂಖ್ಯೆ 38,611 ಕ್ಕೆ ಏರಿಕೆಯಾಗಿದೆ. 30,377 ಮಂದಿ ಇದುವರೆಗೆ ಸೋಂಕು ಮುಕ್ತರಾಗಿದ್ದಾರೆ. ಇದೀಗ 7,403 ಸಕ್ರಿಯ ಪ್ರಕರಣಗಳು ಇವೆ.

ರೋಗಿಗಳ ಸಂಪರ್ಕಕ್ಕೆ ಬಂದ 184 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 104 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

5,532 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 316, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 92, ಕೋವಿಡ್‌ ಕೇರ್‌ ಕೇಂದ್ರದಲ್ಲಿ 625, ಖಾಸಗಿ ಕೋವಿಡ್‌ ಕೇರ್‌ ಕೇಂದ್ರ
ದಲ್ಲಿ 227 ಹಾಗೂ ಖಾಸಗಿ
ಆಸ್ಪತ್ರೆಯಲ್ಲಿ 611 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

13 ಸಾವು: ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಏರುತ್ತಲೇ ಇದೆ. ಆರೋಗ್ಯ ಇಲಾಖೆಯ ಮಂಗಳವಾರದ ವರದಿ ಪ್ರಕಾರ ಕೋವಿಡ್‌ಗೆ
ಮತ್ತೆ 13 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಸತ್ತವರ ಸಂಖ್ಯೆ 831ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT