ಸೋಮವಾರ, ಜುಲೈ 4, 2022
20 °C

ನಂಜನಗೂಡು: ಮಹಿಳೆ, ಯುವಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲದಲ್ಲಿ ಅಕ್ರಮ ಸಂಬಂಧ ಆರೋಪದಡಿ ಗುರುವಾರ ರಾತ್ರಿ ಮಹಿಳೆ ಹಾಗೂ ಆಕೆಯ ಸ್ನೇಹಿತನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ಹಾಗೂ ಮೈದುನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ

ಪತಿ ರವಿ ಹಾಗೂ ಮೈದುನ ಚಂದ್ರ ಬಂಧಿತರು.

‘ಕೊಡಗಿನ ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಪರಿಚಯವಾಗಿದ್ದ ನೇರಳೆ ಗ್ರಾಮದ ವಿಷ್ಣುನನ್ನು ನ.25ರಂದು ನೋಡಿದೆ. ಮನೆಗೆ ಕರೆದಿದ್ದರಿಂದ ಟೀ ಕುಡಿಯಲು ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಪತಿ ರವಿ ಹಾಗೂ ಮೈದುನ ಚಂದ್ರ ಇಬ್ಬರ ಮೇಲೂ ದೈಹಿಕ ಹಲ್ಲೆ ನಡೆಸಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದರು. ತಡರಾತ್ರಿ ಕಂಬದಿಂದ ಬಿಡಿಸಿ ಸಿದ್ದಪ್ಪಾಜಿ ದೇಗುಲದಲ್ಲಿ ಕೂಡಿಹಾಕಿದ್ದರು. ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಹಿಳೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು