ಮಂಗಳವಾರ, ಜನವರಿ 26, 2021
24 °C

‘ಎಚ್‌ಡಿಕೆ ಟೀಕಿಸುವುದು ಸಣ್ಣತನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಬಿಜೆಪಿಯ ಒಳ್ಳೆಯ ಕೆಲಸವನ್ನು ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಆದರೆ, ರಾಜಕೀಯ ಕಾರಣಕ್ಕಾಗಿ ಅವರನ್ನು ಟೀಕಿಸುವುದು ಸಣ್ಣತನ’ ಎಂದು ಸಂಸದ ಪ್ರತಾಪಸಿಂಹ ಅವರು, ಕುಮಾರಸ್ವಾಮಿಯವರನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಮುಖಂಡರಿಗೆ ತಿರುಗೇಟು ನೀಡಿದರು.

ವಿಧಾನ ಪರಿಷತ್‌ನಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜಾತ್ಯತೀತ ಜನತಾದಳ ಬೆಂಬಲ ಸೂಚಿಸಿದ ವಿಚಾರವಾಗಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ‘ಎಚ್.ಡಿ.ಕುಮಾರಸ್ವಾಮಿ 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತ ಪರ ಕಾರ್ಯಕ್ರಮ ನೀಡಿದ್ದಾರೆ’ ಎಂದು ಪ್ರಶಂಸಿಸಿದರು.

‘ಕುಮಾರಸ್ವಾಮಿ ರೈತನ ಮಗ. ಹೀಗಾಗಿ, ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿ ಜಾರಿಗೊಳಿಸಲುದ್ದೇಶಿಸಿರುವ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ’ ಎಂದು ಎಚ್‌ಡಿಕೆ ನಿಲುವನ್ನು ಪ್ರತಾಪಸಿಂಹ ಬೆಂಬಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು