ಮಂಗಳವಾರ, ಅಕ್ಟೋಬರ್ 27, 2020
22 °C
ಗಜಪಡೆ ಸ್ವಾಗತ: ಕೋವಿಡ್‌‌ –19 ನಿಯಮ ಪಾಲಿಸದ ಜಿಲ್ಲಾಡಳಿತ

ಅರಮನೆ ಅಂಗಳದಲ್ಲಿ ಜನಜಂಗುಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೋವಿಡ್‌–19 ಪರಿಸ್ಥಿತಿಯಲ್ಲಿ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು ಕಡ್ಡಾಯವೆಂದು ಸರ್ಕಾರ ಹೇಳುತ್ತಿದ್ದರೂ, ದಸರಾ ಗಜಪಡೆ ಸ್ವಾಗತದ ವೇಳೆ ಶುಕ್ರವಾರ ಮೈಸೂರು ಅರಮನೆ ಆವರಣ ಸಂಪೂರ್ಣ ಜನಮಯವಾಗಿತ್ತು. ಜಾತ್ರೆಯ ವಾತಾವರಣ ಸೃಷ್ಟಿಯಾಗಿತ್ತು.

ಅಂತರ ಕಾಯ್ದುಕೊಳ್ಳುವ ವಿಚಾರ ಬಹಳ ದೂರವೇ ಉಳಿದಿತ್ತು. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಜಪಡೆ ಸಿಬ್ಬಂದಿ, ಪೊಲೀಸರು, ಅರ್ಚಕರು ಹಾಗೂ ಇತರ ಸಿಬ್ಬಂದಿ ಜೊತೆಜೊತೆಯಲ್ಲೇ ನಿಂತು ಕಾರ್ಯಕ್ರಮ ನಿರ್ವಹಿಸಿದರು. ಆನೆಗಳಿಗೆ ಪುಷ್ಪಾರ್ಚನೆ ಮಾಡಲು ಪೈಪೋಟಿ ಏರ್ಪಟ್ಟಿತು. ಆವರಣದಲ್ಲಿ 500ಕ್ಕೂ ಅಧಿಕ ಮಂದಿ ಸೇರಿದ್ದರು. 

‘ಸೋಂಕು ಹೆಚ್ಚುತ್ತಿರುವ ಕಾರಣ ಈ ಬಾರಿ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧಾರ ಕೈಗೊಂಡು ಕೇವಲ ಐದು ಆನೆ ಕರೆತಂದಿದ್ದರೂ ಇಲ್ಲಿ ಮಾತ್ರ ಯಾವುದೇ ಮುನ್ನೆಚ್ಚರಿಕೆ ಕ್ರಮ ಅನುಸರಿಸಿಲ್ಲ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್‌.ಟಿ.ಸೋಮಶೇಖರ್‌, ‘ಗಾಂಧಿ ಜಯಂತಿ ರಜೆ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನಾವು ಕೇವಲ 75 ಮಂದಿಗೆ ಆಹ್ವಾನ ನೀಡಿದ್ದೆವು. ಈಗ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಮುನ್ನೆಚ್ಚರಿಕೆ ಕೈಗೊಂಡು ದಸರಾ ಕಾರ್ಯಕ್ರಮ ನಡೆಸುತ್ತೇವೆ. ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್‌ ಧರಿಸಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು