ಸೋಮವಾರ, ಜುಲೈ 4, 2022
22 °C

ನಂಜನಗೂಡು: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಂಜನಗೂಡು: ಗ್ರಾಮಾಂತರ ಪೊಲೀಸರ ವಶದಲ್ಲಿದ್ದ ತಾಲ್ಲೂಕಿನ ಬ್ಯಾಳ್ಯಾರು ಗ್ರಾಮದ ಸಿದ್ಧರಾಜು (31) ಭಾನುವಾರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಸಾವಿಗೆ ಮಹಿಳೆ ಹಾಗೂ ಆಕೆಯ ಸಂಬಂಧಿಕರು ಹಲ್ಲೆ ನಡೆಸಿರುವುದೇ ಕಾರಣ ಎಂದು ಮೃತ ಸಿದ್ದರಾಜು ಅವರ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ಗ್ರಾಮದ ಮಹಿಳೆಯೊಬ್ಬರ ಮನೆಯ ಮುಂದೆ ಶನಿವಾರ ರಾತ್ರಿ ಇವರು ಅತಿಯಾಗಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದರು. ಪೊಲೀಸ್ ಸಹಾಯವಾಣಿ 112ಗೆ ಮಹಿಳೆ ಕರೆ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿದ್ಧರಾಜು ಅವರನ್ನು ವಶಕ್ಕೆ ಪಡೆದಿದ್ದರು. ಭಾನುವಾರ ಮಧ್ಯಾಹ್ನ ಗ್ರಾಮಾಂತರ ಠಾಣೆಯಲ್ಲಿದ್ದ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟರು. ಮೃತರ ಸಂಬಂಧಿಕರು ನೀಡುವ ದೂರನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು