ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಲಿಸು ಕರ್ನಾಟಕ’ ಸೈಕಲ್‌ ಯಾತ್ರೆ 14ರಿಮದ

Last Updated 7 ಸೆಪ್ಟೆಂಬರ್ 2020, 13:22 IST
ಅಕ್ಷರ ಗಾತ್ರ

ಮಂಡ್ಯ: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಚಲಿಸು ಕರ್ನಾಟಕ’ ಘೋಷವಾಕ್ಯದೊಂದಿಗೆ ರಾಜ್ಯದಾದ್ಯಂತ ಸೆ.14ರಿಂದ 2,700 ಕಿ.ಮೀ. ಸೈಕಲ್‌ ಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್‌.ಎಚ್‌.ಲಿಂಗೇಗೌಡ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೋವಿಡ್‌ ಸಂಕಷ್ಟದಿಂದ ಬಳಲುತ್ತಿರುವ ಸಂದರ್ಭದಲ್ಲಿ ಸರ್ಕಾರ ಅಪಾರ ಹಣ ಲೂಟಿ ಮಾಡುತ್ತಿದೆ. ತೈಲ ಬೆಲೆ ಏರಿಕೆ, ಉದ್ಯೋಗ ನಷ್ಟ, ವ್ಯಾಪಾರ ವಹಿವಾಟು ಕುಂಠಿತವಾಗಿದ್ದು, ಜನರ ಕಷ್ಟಕ್ಕೆ ನೆರವಾಗದೆ ತಮ್ಮದೇ ಲೋಕದಲ್ಲಿ ಜನಪ್ರತಿನಿಧಿಗಳು ಇದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು ಜನರಲ್ಲಿ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು ಸೈಕಲ್‌ ಯಾತ್ರೆ ಆಯೋಜಿಸಲಾಗಿದೆ’ ಎಂದು ಹೇಳಿದರು.

‘ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಮೂರು ಹಂತಗಳಲ್ಲಿ ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ನಲ್ಲಿ ಸೈಕಲ್‌ ಯಾತ್ರೆ ನಡೆಯಲಿದೆ. ಮೊದಲ ಹಂತದ ಯಾತ್ರೆ ಸೆ. 14ರಂದು ಕೋಲಾರದಲ್ಲಿ ಆರಂಭವಾಗಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ ಜಿಲ್ಲೆಯಲ್ಲಿ ಸಾಗಿ ಸೆ. 18ರಂದು ಮದ್ದೂರಿಗೆ ಆಗಮಿಸಲಿದೆ. ಸೆ. 19ರಂದು ಮಂಡ್ಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಲಾಗುವುದು. ನಂತರ ಚಾಮರಾಜನಗರ, ಮೈಸೂರು, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಗಿ ತುಮಕೂರಿನ ಶಿರಾದಲ್ಲಿ ಸಮಾರೋಪಗೊಳ್ಳಲಿದೆ.

‘ಅ. 5ರಂದು ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ವಿಜಯಪುರ, ಬಾಗಲಕೋಟೆ, ನ. 23ರಿಂದ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮ ಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ’ ಎಂದರು.

‘ಮದ್ದೂರು ತಾಲ್ಲೂಕಿನ ಕಾಡಕೊತ್ತನಹಳ್ಳಿಯ ವಕೀಲ ಕಾ.ಮ.ಮಹೇಶ್‌ ಅವರನ್ನು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ’ ಎಂದರು.

ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಉಪಾಧ್ಯಕ್ಷ ರಮೇಶ್‌ಗೌಡ, ರೈತ ಘಟಕದ ಅಧ್ಯಕ್ಷ ಎಸ್‌.ಎಲ್‌.ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT