ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟರಾಜ ಶಿಕ್ಷಣ ಸಂಸ್ಥೆ ‘ದಂಡಿಯಾತ್ರೆ’ ಆ.13ರಂದು

Last Updated 12 ಆಗಸ್ಟ್ 2022, 15:14 IST
ಅಕ್ಷರ ಗಾತ್ರ

ಮೈಸೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಟರಾಜ ಶಿಕ್ಷಣ ಸಂಸ್ಥೆಗಳ ವತಿಯಿಂದ ಆ.13ರಂದು ಬೆಳಿಗ್ಗೆ 9.30ಕ್ಕೆ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿಯಿಂದ ಹೊಸಮಠದವರೆಗೆ ‘ದಂಡಿಯಾತ್ರೆ’ ಹಮ್ಮಿಕೊಳ್ಳಲಾಗಿದೆ’ ಎಂದು ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಡಾ.ಎಸ್.ಶಿವರಾಜಪ್ಪ ತಿಳಿಸಿದರು.

‘ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸರಸ್ವತಿ ವಿಷ್ಣು ಕೋಸಂದರ್ ಉದ್ಘಾಟಿಸಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.

‘ಬೆಳಿಗ್ಗೆ 11ಕ್ಕೆ ಖಿಲ್ಲೆ ಮೊಹಲ್ಲಾದ ನಟರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಉದ್ಘಾಟಿಸಲಿದ್ದಾರೆ. ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮೇಯರ್ ಸುನಂದಾ ಫಾಲನೇತ್ರ, ಗಾಂಧಿ ಮಾರ್ಗಿ ವೇಮಗಲ್ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ’ ಎಂದರು.

ಪ್ರಾಚಾರ್ಯರಾದ ಡಾ.ಎಂ.ಶಾರದಾ, ಡಾ.ಪ್ರಸಾದಮೂರ್ತಿ, ಡಾ.ಮಹೇಶ್ ದಳಪತಿ, ಸತ್ಯ ಸುಲೋಚನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT