ಶುಕ್ರವಾರ, ಜುಲೈ 30, 2021
28 °C

ನಟ ದರ್ಶನ್‌ ಗಲಾಟೆ ಪ್ರಕರಣ; ತನಿಖೆಗೆ ಗೃಹ ಇಲಾಖೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ‘ಸಂದೇಶ್‌ ದ ಪ್ರಿನ್ಸ್’ ಹೋಟೆಲ್‌ ಸಿಬ್ಬಂದಿ ಮೇಲೆ ನಟ ದರ್ಶನ್‌ ಅವರು ನಡೆಸಿದ್ದಾರೆ ಎನ್ನಲಾದ ದೂರಿನ ಕುರಿತು ತನಿಖೆ ನಡೆಸುವಂತೆ ಗೃಹ ಇಲಾಖೆ ಇಲ್ಲಿನ ಪೊಲೀಸರಿಗೆ ಸೂಚಿಸಿದೆ.

ಈ ಕುರಿತು ‘ಪ್ರಜಾವಾಣಿ’ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅವರನ್ನು ಸಂಪರ್ಕಿಸಿದಾಗ ಅವರು, ‘ಇಂದ್ರಜಿತ್ ಲಂಕೇಶ್‌ ನೀಡಿರುವ ದೂರಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆ ಸೂಚಿಸಿದೆ. ಈ ಕುರಿತು ತನಿಖೆ ಕೈಗೆತ್ತಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಘಟನೆ ಕುರಿತು ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್ ಸಹ ನಗರ ಪೊಲೀಸ್ ಕಮಿಷನರ್‌ ಅವರಿಗೆ ಮೇಲ್‌ ಮೂಲಕ ದೂರು ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಬೈಯ್ದಿದ್ದು ನಿಜ, ಹಲ್ಲೆ ನಡೆಸಿಲ್ಲ: ಸಂದೇಶ್ ನಾಗರಾಜ್ ಪುತ್ರ ಸ್ಪಷ್ಟನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು