ದಸರಾ ಮಹೋತ್ಸವದಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು ‌ಚುನಾವಣಾ ಆಯೋಗ ಹಸಿರು ನಿಶಾನೆ

7

ದಸರಾ ಮಹೋತ್ಸವದಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು ‌ಚುನಾವಣಾ ಆಯೋಗ ಹಸಿರು ನಿಶಾನೆ

Published:
Updated:

ಮೈಸೂರು: ದಸರಾ ಮಹೋತ್ಸವ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು ‌ಚುನಾವಣಾ ಆಯೋಗ ಹಸಿರು ನಿಶಾನೆ ತೋರಿದೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವುದರಿಂದ ದಸರೆ ಆಚರಣೆಗೂ ನೀತಿ ಸಂಹಿತೆ ಬಿಸಿ ತಟ್ಟುವ ಆತಂಕ ಎದುರಾಗಿತ್ತು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಮೈಸೂರು ಜಿಲ್ಲೆಯ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರ ಕೂಡ ಸೇರಿರುವುದು ಇದಕ್ಕೆ ಕಾರಣ.

ಈ ಬಗ್ಗೆ ಸಲಹೆ ಕೋರಿ ಚುನಾವಣಾ ಆಯೋಗಕ್ಕೆ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಸೋಮವಾರ ಪತ್ರ ಬರೆದಿದ್ದರು.

‘ಆಯೋಗ ಹಸಿರು ನಿಶಾನೆ ಲಭಿಸಿರುವುದರಿಂದ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಬಹುದು. ನಿಗದಿಯಾದಂತೆ ದಸರಾ ಕಾರ್ಯಕ್ರಮಗಳು ನಡೆಯಲಿವೆ. ಯಾವುದೇ ನಿರ್ಬಂಧ ವಿಧಿಸಿಲ್ಲ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಕೆ.ಆರ್‌.ನಗರ ತಾಲ್ಲೂಕಿನಲ್ಲಿ ನಡೆಯಲಿರುವ ಗ್ರಾಮೀಣ ದಸರೆ ಕಾರ್ಯಕ್ರಮಗಳಲ್ಲಿ ಮಾತ್ರ ಜನಪ್ರತಿನಿಧಿಗಳು ಪಾಲ್ಗೊಳ್ಳುವಂತಿಲ್ಲ’ ಎಂದರು.‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !