ಭಾನುವಾರ, ಡಿಸೆಂಬರ್ 6, 2020
22 °C

ಅರಮನೆ ಆವರಣದಲ್ಲಷ್ಟೇ ನಾಳೆ ಜಂಬೂಸವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೋವಿಡ್‌ ಪರಿಸ್ಥಿತಿಯಿಂದಾಗಿ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. 

ಸೋಮವಾರ ಮಧ್ಯಾಹ್ನ 2.59ರಿಂದ 3.20ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 3.40ರಿಂದ 4.15ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮೆರವಣಿಗೆಗೆ ಚಾಲನೆ ನೀಡಿ, ಅಂಬಾರಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. 

ಕೋವಿಡ್‌ ಕಾರಣ 300 ಮೀಟರ್‌ ಅಂತರದೊಳಗೆ ಮೆರವಣಿಗೆ ನಡೆಯಲಿದ್ದು, 30ರಿಂದ 40 ನಿಮಿಷಗಳಲ್ಲಿ ಕೊನೆಗೊಳ್ಳಲಿದೆ. 300 ಮಂದಿಗೆ ಮಾತ್ರ ಪ್ರವೇಶಾವಕಾಶವಿದೆ.

ಜಂಬೂಸವಾರಿಯನ್ನು ‘ಪ್ರಜಾವಾಣಿ’ ಫೇಸ್‌ಬುಕ್ ಲೈವ್‌ನಲ್ಲಿ‌ (Fb.com/Prajavani.net) ವರ್ಚು ವಲ್ ಆಗಿ ವೀಕ್ಷಣೆ ಮಾಡಬಹುದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು