ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ: ಚಲನಚಿತ್ರ ನಿರ್ಮಾಣ ಕಾರ್ಯಾಗಾರ

Last Updated 21 ಆಗಸ್ಟ್ 2022, 14:07 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗುವ ಚಲನಚಿತ್ರೋತ್ಸವದ ಭಾಗವಾಗಿ ಸೆ.22ರಿಂದ 24ರವರೆಗೆ ‘ಚಿತ್ರ ನಿರ್ಮಾಣ–ಪೂರ್ವ ತಯಾರಿ’ ಕುರಿತು ಕಾರ್ಯಾಗಾರ ನಡೆಸಲು ಉದ್ದೇಶಿಸಲಾಗಿದೆ.

ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಕನ್ನಡ ಚಲನಚಿತ್ರ ರಂಗದ ಅನುಭವಿ, ಹೆಸರಾಂತ ನಿರ್ದೇಶಕರು ಶಿಬಿರಾರ್ಥಿಗಳಿಗೆ ವಿಷಯಾಧಾರಿತ ಮಾಹಿತಿಯ ತರಗತಿಗಳನ್ನು ನಡೆಸಿಕೊಡಲಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ, ಸೆ.27ರಿಂದ ಅ.3ರವರೆಗೆ ಐನಾಕ್ಸ್ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಮೂರು ಪರದೆಗಳಲ್ಲಿ ದಸರಾ ಚಲನಚಿತ್ರೋತ್ಸವದ ಅಂಗವಾಗಿ ಪ್ರದರ್ಶಿಸಲಾಗುವ ಚಲನಚಿತ್ರಗಳನ್ನು ವೀಕ್ಷಿಸಲು ಶೇ 50ರಷ್ಟು ರಿಯಾಯಿತಿ ದರದಲ್ಲಿ ಪಾಸ್‌ಗಳನ್ನು ನೀಡಲಾಗುವುದು. ಸಮಾರೋಪ ಸಮಾರಂಭದ ನಂತರ ಪ್ರಮಾಣಪತ್ರ ವಿತರಿಸಲಾಗುವುದು.

ಭಾಗವಹಿಸಲು ಬಯಸುವವರು https://bit.ly/3dxD22D ಲಿಂಕ್ ಕ್ಲಿಕ್ಕಿಸಿದಾಗ ಕಾಣಿಸುವ ಗೂಗಲ್ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಅಲ್ಲಿ ನೀಡಲಾಗಿರುವ ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ, ₹ 300 ಶುಲ್ಕ ಪಾವತಿಸಿ ಸೆ.19ರೊಳಗೆ ಹೆಸರು ನೋಂದಾಯಿಸಬಹುದು.

ಮೊದಲು ನೋಂದಾಯಿಸುವ 200 ಶಿಬಿರಾರ್ಥಿಗಳಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಹೆಚ್ಚಿನ ಮಾಹಿತಿಗೆ 9844393691 ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT