ಬುಧವಾರ, ಅಕ್ಟೋಬರ್ 16, 2019
22 °C

ಇಂದಿನಿಂದ 3 ದಿನ ಶ್ರೀರಂಗಪಟ್ಟಣ ದಸರಾ

Published:
Updated:

ಮಂಡ್ಯ: ಮೈಸೂರು ದಸರಾಕ್ಕೂ ಪುರಾತನವಾದ ಶ್ರೀರಂಗಪಟ್ಟಣ ದಸರಾ ಅ.3ರಿಂದ 5ರವರೆಗೆ ನಡೆಯಲಿದ್ದು, ಬಿಜೆಪಿಯ ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಉತ್ಸವ ಉದ್ಘಾಟಿಸಲಿದ್ದಾರೆ.

ಕಿರಂಗೂರಿನ ಬನ್ನಿಮಂಟಪದಲ್ಲಿ ಮಧ್ಯಾಹ್ನ 3ಕ್ಕೆ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ ಹಾಗೂ ಜಂಬೂ ಸವಾರಿ ಆರಂಭಗೊಳ್ಳಲಿದೆ. ಮೂರು ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ಉತ್ಸವದಲ್ಲಿ ವಿಶೇಷವಾಗಿ ಹೆಲಿಕಾಪ್ಟರ್‌ ಜಾಯ್‌ ರೈಡ್‌, ಕೆಆರ್‌ಎಸ್‌ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೋತ್ಸವ ಆಯೋಜಿಸಲಾಗಿದೆ. ಬೃಂದಾವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

Post Comments (+)