ಮಂಗಳವಾರ, ಅಕ್ಟೋಬರ್ 27, 2020
23 °C

ಮೈಸೂರು ದಸರಾ: 17ರಂದು ಉದ್ಘಾಟನೆ, 26ರಂದು ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು ದಸರಾ

ಮೈಸೂರು: ದಸರಾ ಮಹೋತ್ಸವದ ಉದ್ಘಾಟನೆ ಅ.17 ರಂದು ಬೆಳಿಗ್ಗೆ 7.45 ರಿಂದ 8.15ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯಲಿದೆ.

ಅ.26ರಂದು ಅರಮನೆ ಮುಂಭಾಗ ಮಧ್ಯಾಹ್ನ 2.59ರಿಂದ 3.20ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 3.40ರಿಂದ 4.15ರೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

17ರಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಅ.24ರವರೆಗೆ ನಿತ್ಯ ಎರಡು ಗಂಟೆ ನೃತ್ಯರೂಪಕ, ಕೊಳಲುವಾದನ, ಭಕ್ತಿಗೀತೆ, ಪಂಚವೀಣೆ, ವಚನಗಾಯನ, ದಾಸವಾಣಿ, ರಾಜೇಶ್ ಕೃಷ್ಣನ್‌ ತಂಡದಿಂದ ಎಸ್‌‌ಪಿಬಿ ನುಡಿನಮನ ಸೇರಿದಂತೆ ಹಲವು ಕಾರ್ಯಕ್ರಮ ನಡೆಯಲಿವೆ. ಮೈಸೂರು, ಬೆಂಗಳೂರು, ರಾಯಚೂರು, ಹಾಸನ ತಂಡಗಳು ಕಾರ್ಯಕ್ರಮ ನೀಡಲಿವೆ. ಆಹ್ವಾನ ಪತ್ರಿಕೆಯಲ್ಲೂ ಕೋವಿಡ್‌ ಜಾಗೃತಿ ಮೂಡಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು