ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರೆ: ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

Last Updated 27 ಸೆಪ್ಟೆಂಬರ್ 2021, 16:38 IST
ಅಕ್ಷರ ಗಾತ್ರ

ಮೈಸೂರು: ದಸರಾ ಪ್ರಯುಕ್ತ ರಾಜವಂಶಸ್ಥರು ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸುವುದರಿಂದ ಅ.1, 7, 14, 15 ಹಾಗೂ 31 ರಂದು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ಸೀಮಿತ ಅವಧಿಯ ನಿರ್ಬಂಧ ವಿಧಿಸಲಾಗಿದೆ.

ಅ.1ರಂದು ಸಿಂಹಾಸನ ಜೋಡಣೆ ಕಾರಣ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ, 7ರಂದು ಖಾಸಗಿ ದರ್ಬಾರ್‌ ನಡೆಯಲಿದ್ದು, ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರವೇಶವಿರುವುದಿಲ್ಲ. 14ರಂದು ಆಯುಧ ಪೂಜೆ ಪ್ರಯುಕ್ತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ, 15ರಂದು ವಿಜಯದಶಮಿ ಕಾರಣ ಸಂಪೂರ್ಣ ದಿನ ಪ್ರವೇಶವಿರುವುದಿಲ್ಲ. ಅ.31ರಂದು ಸಿಂಹಾಸನವನ್ನು ಸ್ವಸ್ಥಾನದಲ್ಲಿ ಇಡುತ್ತಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT