ಶನಿವಾರ, ಮೇ 15, 2021
24 °C

ಆಕ್ಸಿಜನ್‌ ಕೊರತೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿಲ್ಲ: ಶ್ರೀನಿವಾಸ ಪ್ರಸಾದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಅಕ್ಸಿಜನ್ ಕೊರತೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ನನಗೆ ಮಾಹಿತಿ ನೀಡಿಲ್ಲ. ಜಿಲ್ಲಾಧಿಕಾರಿ ಜೊತೆ ಭಾನುವಾರ ರಾತ್ರಿ 9 ಗಂಟೆ ವೇಳೆಗೆ ಮಾತನಾಡಿದ್ದೆ. ಆಕ್ಸಿಜನ್‌ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದರು’ ಎಂದು ಚಾಮರಾಜನಗರದ ಸಂಸದ ವಿ.ಶ್ರೀನಿವಾಸಪ್ರಸಾದ್‌ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಚಾಮರಾಜನಗರದ ಜಿಲ್ಲಾಧಿಕಾರಿ ಮೈಸೂರು ಸಂಸದರ ಜೊತೆ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಮೈಸೂರಿನಿಂದ ಆಕ್ಸಿಜನ್‌ ಪೂರೈಕೆ ಆಗಿಲ್ಲ ಎಂಬ ಮಾಹಿತಿಯಷ್ಟೆ ಸದ್ಯಕ್ಕೆ ನನಗೆ ಗೊತ್ತಾಗಿದೆ. ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿರುವ ಕಾರಣ ನಾನು ಚಾಮರಾಜನಗರಕ್ಕೆ ಹೋಗುತ್ತಿಲ್ಲ. ಘಟನೆಗೆ ಸಂಬಂಧಿಸಿದ ಎಲ್ಲ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ’ ಎಂದರು.

‘ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದ ಕೋವಿಡ್ ನಿರ್ವಹಣೆ ಬಗ್ಗೆ ಕೇಂದ್ರ ಸರ್ಕಾರವೇ ಮೆಚ್ವುಗೆ ವ್ಯಕ್ತಪಡಿಸಿತ್ತು. ಈಗ ಅಲ್ಲಿ ನಡೆದಿರುವ ಘಟನೆ ದುರದೃಷ್ಟಕರ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ನಾನು ಒತ್ತಾಯಿಸುತ್ತೇನೆ’ ಎಂದು ಹೇಳಿದರು.

ಇದನ್ನೂ ಓದಿ.. ಚಾಮರಾಜನಗರ: ಆಮ್ಲಜನಕ ಕೊರತೆಯಿಂದ 12 ಸಾವು– ಜಿಲ್ಲಾಸ್ಪತ್ರೆ ಮಾಹಿತಿ
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು