ಬುಧವಾರ, ಅಕ್ಟೋಬರ್ 21, 2020
21 °C

ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸೋಮವಾರ ಸಂಜೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ದೇವರ ದರ್ಶನ ಪಡೆದು, ಸಂಕಲ್ಪ ಪೂಜೆ, ಅಭಿಷೇಕ ಸೇವೆಗಳಲ್ಲಿ ಪಾಲ್ಗೊಂಡರು.

ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶ್ವೇತವಸ್ತ್ರ, ಫಲತಾಂಬೂಲ ನೀಡಿ ಗೌರವಿಸಲಾಯಿತು.

ಬಳಿಕ ಕಪಿಲಾ ನದಿ ಸ್ನಾನಘಟ್ಟಕ್ಕೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ವೀಕ್ಷಿಸಿದರು. ದೇವಾಲಯದಲ್ಲಿ ಆಗಬೇಕಾಗಿರುವ ಅಭಿವೃದ್ದಿ ಕೆಲಸ, ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಗರದ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಕೋವಿಡ್ 19 ಸೋಂಕಿತರ ವಿವರ ಹಾಗೂ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈಶ್ವರ್ ಕನಾಟ್ಕೆ ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ರೋಹಿಣಿ ಸಿಂಧೂರಿ ಇಲಾಖೆಯ ಪ್ರಗತಿ ಪರಿಶೀಲಿಸಿದರು.

ತಹಶೀಲ್ದಾರ್ ಕೆ.ಎಂ.ಮಹೇಶ್‍ಕುಮಾರ್, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ದೇವಾಲಯದ ಇ.ಒ ಶಿವಕುಮಾರಯ್ಯ, ಆಗಮಿಕ ನಾಗಚಂದ್ರ ದೀಕ್ಷಿತ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಶಿರೇಖಾ, ಮಂಜುಳಾ ಮಧು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು