ಮಂಗಳವಾರ, ಅಕ್ಟೋಬರ್ 20, 2020
27 °C

ಡಿ.ಸಿ ವರ್ಗಾವಣೆ ವಿವಾದ: 14ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅಧಿಕಾರ ವಹಿಸಿಕೊಂಡ ಕೇವಲ 29 ದಿನಗಳಲ್ಲಿ ತಮ್ಮನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿ.ಶರತ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ಅ.14ಕ್ಕೆ ಮುಂದೂಡಿದೆ. 

ಹೀಗಾಗಿ, ಈಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇನ್ನು ಏಳು ದಿನ ನಿರಾತಂಕವಾಗಿ ಕಾರ್ಯನಿರ್ವಹಿಸಬಹುದಾಗಿದೆ. 

ಅವಧಿ ಪೂರ್ಣಗೊಳಿಸುವ ಮುನ್ನವೇ ವರ್ಗಾವಣೆ ಮಾಡಿರುವ ಕಾರಣ ಆದೇಶವನ್ನು ತಡೆ ಹಿಡಿಯುವಂತೆ ಐಎಎಸ್‌ ಅಧಿಕಾರಿ ಶರತ್‌ ಮನವಿ ಮಾಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.