ಶನಿವಾರ, ಅಕ್ಟೋಬರ್ 31, 2020
20 °C

ಡಿಡಿಪಿಐ ಸೇರಿ 25ಕ್ಕೂ ಅಧಿಕ ಶಿಕ್ಷಕರಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಕೋವಿಡ್–19‌ ಪರೀಕ್ಷೆ ನಡೆಸಲಾಗುತ್ತಿದ್ದು, ಡಿಡಿಪಿಐ ಸೇರಿದಂತೆ 25ಕ್ಕೂ ಅಧಿಕ ಶಿಕ್ಷಕರಿಗೆ ಸೋಂಕು ಇರುವುದು ಪತ್ತೆಯಾಗಿದೆ. 

ಡಿಡಿಪಿಐ ಕಚೇರಿಯ ಕೆಲ ಸಿಬ್ಬಂದಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ. ಶಿಕ್ಷಕರು, ಅವರು ಕುಟುಂಬದವರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರದಿಂದಲೇ ಆಯಾಯ ಬಿಇಒ ಕಚೇರಿಗಳಲ್ಲಿ, ಶಿಕ್ಷಕರ ಭವನದಲ್ಲಿ ಪರೀಕ್ಷೆ ಮಾಡಿಸಲಾಗುತ್ತಿದೆ. 

ಜಿಲ್ಲೆಯಲ್ಲಿ ಪ್ರಾಥಮಿಕ ಹಂತದಲ್ಲಿ 3 ಸಾವಿರ ಹಾಗೂ ಪ್ರೌಢಶಾಲಾ ಹಂತದಲ್ಲಿ 2 ಸಾವಿರ ಶಿಕ್ಷಕರು ಇದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು