ಚುಂಚನಕಟ್ಟೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

7

ಚುಂಚನಕಟ್ಟೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Published:
Updated:

‌ಕೆ.ಆರ್.ನಗರ: ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ಶುಕ್ರವಾರ ಸಂಜೆ ಮುಳುಗಿ ಮೃತಪಟ್ಟಿದ್ದಾರೆ.‌

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಆನೆ ಕನ್ನಾಂಬಾಡಿ ಗ್ರಾಮದ ಹರ್ಷ (11) ಹಾಗೂ ಕೆ.ಆರ್.ನಗರ ತಾಲ್ಲೂಕಿನ ಮನುಗನಹಳ್ಳಿ ಸಮೀಪದ ಬೆಟ್ಟಹಳ್ಳಿ ಗ್ರಾಮದ ಲೋಕೇಶ್ (16) ಮೃತಪಟ್ಟ ಬಾಲಕರು.

ಇವರು ತಮ್ಮ ಬಂಧುಗಳ ಜತೆ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಈಜಲು ತೆರಳಿದ ಇಬ್ಬರೂ ಸುಳಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !