ಭಾನುವಾರ, ಸೆಪ್ಟೆಂಬರ್ 19, 2021
25 °C

ಕಾಡಿನಿಂದ ಬಂದ ಜಿಂಕೆ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸೂರು: ವೀರನಹೊಸಹಳ್ಳಿ ಅರಣ್ಯದಿಂದ ದಾರಿ ತಪ್ಪಿ ಬುಧವಾರ ಬೆಳಿಗ್ಗೆ ಬಂದಿದ್ದ ಗಂಡು ಜಿಂಕೆಯನ್ನು ಸಾರ್ವಜನಿಕರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ನಗರದ ಲಾಲ್‌ಬನ್ ಬೀದಿ ದೊಡ್ಡ ಮಸೀದಿ ಬಳಿ ಬೆಳ್ಳಂ ಬೆಳಿಗ್ಗೆ ನಾಯಿಗಳ ಹಿಂಡಿನ ಮಧ್ಯೆ ಜಿಂಕೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಬೀದಿನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಸಹಾಯಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್ ತಂಡ ಜಿಂಕೆಯನ್ನು ವಶಕ್ಕೆ ಪಡೆದು ಪಶುವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಿದ ಬಳಿಕ ಕಲ್ಲಬೆಟ್ಟ ಅರಣ್ಯಕ್ಕೆ ಬಿಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು