ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ

Last Updated 22 ಜುಲೈ 2021, 10:19 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಒತ್ತಾಯಿಸಿದರು.

ಶ್ರೀರಾಮುಲು ಅವರು ನಾಯಕ ಸಮಾಜ ಮಾತ್ರವಲ್ಲ ಶೋಷಣೆಗೆ ಒಳಗಾದ ಎಲ್ಲ ಸಮುದಾಯಗಳ ನಾಯಕರಾಗಿದ್ದಾರೆ. ಯಡಿಯೂರಪ್ಪ ಅವರಂತೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇಷ್ಟು ಪ್ರಯತ್ನಪಟ್ಟಿರುವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಅವರನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು‌.

ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವುದಾಗಿ ಬಿಜೆಪಿ ಘೋಷಿಸಿತ್ತು. ಆದರೆ, ಆ ಆಶ್ವಾಸನೆಯನ್ನೂ ಈಡೇರಿಸಿಲ್ಲ. 60 ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಯಾವುದೇ ರಾಜಕೀಯ ಪಕ್ಷವೂ ಈ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಉಪಾಧ್ಯಕ್ಷ ರೈಲ್ವೆ ಸಿದ್ದಯ್ಯ ಮಾತನಾಡಿ, ‘ಒಂದು ವೇಳೆ ಬೇಡಿಕೆ ಈಡೇರದೇ ಹೋದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು’ ಎಂದರು‌.

ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹುಣಸೂರು, ಜಿಲ್ಲಾಧ್ಯಕ್ಷ ಆರ್.ಮಂಜುನಾಥ, ಪದಾಧಿಕಾರಿ ಮಯೂರ ಕಲ್ಕುಣಿಕೆ ಚನ್ನನಾಯಕಕೋಟೆ, ಕಾಳಿದಾಸ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT