ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳ್ಳಿಗಳಲ್ಲಿ ಮನೆಮನೆಗೆ ನೀಡಿ ಲಸಿಕೆ ನೀಡಲು ಒತ್ತಾಯ

Last Updated 15 ಜೂನ್ 2021, 15:05 IST
ಅಕ್ಷರ ಗಾತ್ರ

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಒತ್ತಾಯಿಸಿದೆ.‌

ಕೊರೊನಾ 2ನೇ ಅಲೆ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಆವರಿಸಿದೆ. ಗ್ರಾಮೀಣರಿಗೆ ಆನ್‌ಲೈನ್‌ ಮೂಲಕ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳುವಷ್ಟು ತಿಳಿವಳಿಕೆ ಇರುವುದಿಲ್ಲ. ಹೀಗಾಗಿ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯ ಪ್ರತಿ ಹಳ್ಳಿಯ ಮನೆಮನೆಗೆ ತೆರಳಿ ಉಚಿತವಾಗಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿದೆ.

ಈ ಕುರಿತ ಮನವಿ ಪತ್ರವನ್ನು ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಸಲ್ಲಿಸಿದರು.

ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್, ಗೌರವ ಅಧ್ಯಕ್ಷ ಎಂ.ಚಂದ್ರಶೇಖರ್, ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ಮಾಜಿ ಮೇಯರ್ ಪುರುಷೋತ್ತಮ್, ಸಮಿತಿಯ ಪ್ರಧಾನ ಸಂಚಾಲಕ ಡೈರಿ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT