ಶುಕ್ರವಾರ, ಆಗಸ್ಟ್ 12, 2022
28 °C
ಇಂದು ಪ್ಲಾಸ್ಮಾ ದಾನ ಶಿಬಿರ, ಸಿದ್ದರಾಮಯ್ಯ ಅವರಿಂದ ಉದ್ಘಾಟನೆ

ಪ್ಲಾಸ್ಮಾ ಬ್ಯಾಂಕ್ ತೆರೆಯಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ಪ್ಲಾಸ್ಮಾ ಬ್ಯಾಂಕ್‌ ತೆರೆಯಬೇಕು. ಕನಿಷ್ಠ ಪಕ್ಷ ಪ್ಲಾಸ್ಮಾ ತೆಗೆದು ರೋಗಿಗಳಿಗೆ ನೀಡುವ ವ್ಯವಸ್ಥೆಯಾದರೂ ಜಾರಿಗೆ ಬರಬೇಕು. ಇಲ್ಲದೇ ಹೋದರೆ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಡಾಕ್ಟರ್ ಸೆಲ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಭರತ್‌ಕುಮಾರ್ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸದ್ಯ ಮೈಸೂರಿನವರು ಪ್ಲಾಸ್ಮಾ ತೆಗೆದುಕೊಳ್ಳಲು ಮಂಡ್ಯ ಹಾಗೂ ಬೆಂಗಳೂರಿಗೆ ಹೋಗಬೇಕಾದ ಸ್ಥಿತಿ ಇದೆ. ಕನಿಷ್ಠ ಜಿಲ್ಲಾಡಳಿತ ಈ ವ್ಯವಸ್ಥೆಯನ್ನಾದರೂ ಇಲ್ಲಿ ಕಲ್ಪಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಇದಕ್ಕಾಗಿಯೇ ಪ್ಲಾಸ್ಮಾ ದಾನ ಶಿಬಿರವನ್ನು ಕೆಪಿಸಿಸಿ ಡಾಕ್ಟರ್ ಸೆಲ್‌ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಉದಯಗಿರಿಯ ಕೂಬ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸೆ. 18ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದೆ. ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಡಾ.ಹರ್ಷವರ್ಧನ್ ತಿಳಿಸಿದರು.

ಲಕ್ಷಣ ಇರುವ ಕೋವಿಡ್‌ ರೋಗಿಗಳು ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಬಹುದು. ಇದರಿಂದ ಒಬ್ಬ ಕೋವಿಡ್ ರೋಗಿಯ ಜೀವವನ್ನು ಉಳಿಸಬಹುದಾಗಿದೆ. ಈಗಾಗಲೇ 90 ಮಂದಿ ದಾನ ಮಾಡುವುದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಮತ್ತಷ್ಟು ಜನರು ಮೊ: 7892799074, 9535177064, 9880973703 ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಡಾ.ಶಾಜಿಯಾ ಸುಲ್ತಾನ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು