ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಗ್ರಹ

Last Updated 2 ಜೂನ್ 2020, 10:14 IST
ಅಕ್ಷರ ಗಾತ್ರ

ಮೈಸೂರು: ಉಪ್ಪಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಯೋಗೀಶ್ ಉಪ್ಪಾರ ಆಗ್ರಹಿಸಿದರು.‌

ಉಪ್ಪಾರ ನಿಗಮ ಮಂಡಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಬೇಕು ಹಾಗೂ ನಿಗಮ ಮಂಡಳಿಗೆ ₹ 50 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಜನಾಂಗದ ಮುಖಂಡರನ್ನು ಗುರುತಿಸಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು, ಉಪ್ಪಾರ ನಿಗಮದ ಮೂಲಕ ಬಡಕುಟುಂಬಗಳಿಗೆ ₹ 5 ಸಾವಿರ ಆರ್ಥಿಕ ನೆರವು ನೀಡಬೇಕು, ಸಮಾಜದ ಮುಖಂಡರನ್ನು ಗುರುತಿಸಿ ಇನ್ನಿತರ ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಸಂಘಟನೆಯ ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT