ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

Last Updated 5 ಫೆಬ್ರುವರಿ 2022, 13:35 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಸರಾಸರಿ 50 ಜನ ಸಾಯುತ್ತಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದರೂ ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸುತ್ತಿಲ್ಲ’ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನಗರದ ಹಾರ್ಡಿಂಜ್‌ ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

‘ಕೋವಿಡ್‌ನಿಂದ ಮೃತಪಟ್ಟವರ ಬಗ್ಗೆ ಗಮನ ಹರಿಸುತ್ತಿಲ್ಲ. ಮೃತರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡುತ್ತಿಲ್ಲ. ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ವ್ಯಾಪಾರಿ ಕೇಂದ್ರಗಳಾಗಿದ್ದು, ದುಬಾರಿ ಶುಲ್ಕ ವಸೂಲಿ ಮಾಡುತ್ತಿವೆ’ ಎಂದು ಆರೋಪಿಸಿದರು.

‘ಕೋವಿಡ್‌ ವಿಚಾರದಲ್ಲಿ ಸರ್ಕಾರವು ಜವಾಬ್ದಾರಿಯಿಂದ ವರ್ತಿಸಬೇಕು. ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲೇ ಉಳಿಸಿಕೊಳ್ಳಬೇಕು. ಖಾಸಗಿ ಸಂಸ್ಥೆಗಳಿಗೆ ವಹಿಸಬಾರದು’ ಎಂದು ಆಗ್ರಹಿಸಿದರು.

ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT