ಗುರುವಾರ , ಮಾರ್ಚ್ 30, 2023
24 °C

ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡ ಪುನರ್ ನಿರ್ಮಾಣ: ಭೈರತಿ ಬಸವರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ಇಲ್ಲಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳನ್ನು ಸಂಪೂರ್ಣವಾಗಿ ತೆರವು ಗೊಳಿಸಿ ಈಗ ಇರುವ ಶೈಲಿಯಲ್ಲಿಯೇ ಮರು ನಿರ್ಮಾಣ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದರು.

ದೇವರಾಜ ಮಾರುಕಟ್ಟೆಗೆ ₹ 100 ಕೋಟಿ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಕ್ಕೆ ₹ 45 ಕೋಟಿ ತೆಗೆದಿರಿಸಲಾಗಿದೆ‌.‌ 2 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು‌. ಪಾಲಿಕೆಯ ಮೇಯರ್ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕುಡಿಯುವ ನೀರಿನ ಯೋಜನೆ ಉದ್ಘಾಟನೆ: ಮೈಸೂರಿನ ವಿಜಯನಗರ 4ನೇ ಹಂತದ 8 ಸಾವಿರ ಕುಟುಂಬಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಉದ್ಘಾಟಿಸಿದರು.

ಸಚಿವರಿಬ್ಬರು ಶುಕ್ರವಾರ ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು