ಭಾನುವಾರ, ಜೂನ್ 26, 2022
21 °C
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ

ಮರೆಯಲಾಗದ ಕಾರ್ಯಕ್ರಮ ನೀಡಿದವರು ದೇವರಾಜ ಅರಸು: ಆರ್.ರಘು ಕೌಟಿಲ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಡಿ.ದೇವರಾಜ ಅರಸು ಅವರು ಮರೆಯಲಾಗದಂತಹ ನೀಡಿದ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ಅಭಿಪ್ರಾಯಪಟ್ಟರು.

ಡಿ.ದೇವರಾಜ ಅರಸು ಅವರ ಪುಣ್ಯ ಸ್ಮರಣೆ ಅಂಗವಾಗಿ ಬೆಂಗಳೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸ್ಮರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುಳಿತಕ್ಕೆ ಒಳಗಾದವರ ಏಳಿಗೆಗಾಗಿ ಅವರು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದರು. ದನಿ ಇಲ್ಲದ ಸಮಾಜಗಳಿಗೆ ಅವರು ಮೀಸಲಾತಿ ಸೌಲಭ್ಯ ಕಲ್ಪಿಸಿದರು ಎಂದು ಶ್ಲಾಘಿಸಿದರು.

ಇವರ ಹಾದಿಯಲ್ಲಿಯೇ ಇಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆದು ಎಲ್ಲ ಸಮಾಜಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ವರ್ಗಗಳ ಶ್ರಮಿಕರಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೋವಿಡ್ ಸಂಕಷ್ಟಕ್ಕೆ ತುತ್ತಾದ ಅನೇಕ ಕುಟುಂಬಗಳಿಗೆ ಸದ್ಯದಲ್ಲೇ ಕೆಲವು ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು.

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್ ಇದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು