ಭಾನುವಾರ, ಸೆಪ್ಟೆಂಬರ್ 25, 2022
21 °C

ಸಿದ್ದರಾಮಯ್ಯಗೆ ವರುಣಾದಲ್ಲೇ ಸ್ಪರ್ಧಿಸುವಂತೆ ಒತ್ತಾಯಿಸಿದ ಜನ, ಧ್ರುವನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಜನರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಒತ್ತಾಯಿಸಿದರು.

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ‌ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ 'ಸ್ವಾತಂತ್ರ್ಯ ‌ನಡಿಗೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‌ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

'ಸಿದ್ದರಾಮಯ್ಯ ಅವರು ಬೇರೆ ಕಡೆ ಹೋಗುವುದು ಬೇಡ. ರಾಜಕೀಯವಾಗಿ ಬಲ ತುಂಬಿದ, ವಿಧಾನಸಭೆಯ ‌ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯನ್ನಾಗಿ ಮಾಡಿದ ಪುಣ್ಯಕ್ಷೇತ್ರವಿದು. ಇಲ್ಲಿಗೆ ಸಾವಿರಾರು‌ ಕೋಟಿ ರೂಪಾಯಿ ಅನುದಾನ ನೀಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಿದ್ದರು. ಆದ್ದರಿಂದ ಇಲ್ಲೇ ಇನ್ನೊಮ್ಮೆ ಸ್ಪರ್ಧಿಸಬೇಕು' ಎಂದು ಧ್ರುವನಾರಾಯಣ ‌ಕೋರಿದರು. ಇದಕ್ಕೆ ಸಿಳ್ಳೆ- ಚಪ್ಪಾಳೆಗಳ ಮೂಲಕ ಜನರು ಧ್ವನಿಗೂಡಿಸಿದರು.

ಹಾಲಿ ಶಾಸಕ, ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವೇದಿಕೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು