ಶುಕ್ರವಾರ, ನವೆಂಬರ್ 15, 2019
22 °C

ದೇವರ ದರ್ಶನ ಪಡೆದ ಅನರ್ಹ ಶಾಸಕರು

Published:
Updated:
Prajavani

ನಂಜನಗೂಡು: ಶಾಸಕ, ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಗುರುವಾರ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಒಂದು ಗಂಟೆ ನಂತರ ಅನರ್ಹ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಮಹೇಶ್ ಕುಮಠಳ್ಳಿ ಅವರು ದೇವರ ದರ್ಶನ ಪಡೆದರು.

ದೇವಾಲಯದ ನವಗ್ರಹಗಳಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ಅವರಿಗೆ ದೇವರ ಶೇಷ ವಸ್ತ್ರ ಹಾಗೂ ಪ್ರಸಾದ ನೀಡಲಾಯಿತು.

ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ‘ಶಾಸಕ ಸ್ಥಾನದ ಅನರ್ಹತೆ ಬಗ್ಗೆ ತೀರ್ಪು ಬರುವವರೆಗೆ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್, ಬಿಜೆಪಿ, ಹಾಗೂ ಜೆಡಿಎಸ್‌ನೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಅನರ್ಹಗೊಂಡ ಶಾಸಕರೆಲ್ಲ ಒಟ್ಟಾಗಿದ್ದೇವೆ. ತೀರ್ಪು ಬಂದ ನಂತರ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುತ್ತೇವೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)