ಮತದಾನ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಭಾನುವಾರ, ಏಪ್ರಿಲ್ 21, 2019
26 °C
ಒಟ್ಟು 9,624 ಮತಗಟ್ಟೆ ಸಿಬ್ಬಂದಿ ಕಾರ್ಯನಿರ್ವಹಣೆ; ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌

ಮತದಾನ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

Published:
Updated:

ಪ್ರಜಾವಾಣಿ ವಾರ್ತೆ

ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರು–ಕೊಡಗು ಕ್ಷೇತ್ರದ ಮತದಾನ ಏ.18ರಂದು ನಡೆಯಲಿದ್ದು, ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಮೈಸೂರು–ಕೊಡಗು ಲೋಕ ಸಭಾ ಕ್ಷೇತ್ರದಲ್ಲಿ ಒಟ್ಟು 18.95 ಲಕ್ಷ ಮತದಾರರಿದ್ದು, 2,187 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಅಧಿಕಾರಿಗಳು ಸೇರಿ ದಂತೆ ಒಟ್ಟು 9,624 ಮತಗಟ್ಟೆ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಆಭಿರಾಂ ಜಿ.ಶಂಕರ್‌ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಲೋಕಸಭಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಮತ್ತು ಡಿಮಸ್ಟರಿಂಗ್‌ ಕೇಂದ್ರಗಳನ್ನು ತೆರೆಯಲಾಗಿದೆ. ಮತಗಟ್ಟೆ ಅಧಿಕಾರಿ ಗಳು ಮತ್ತು ಸಿಬ್ಬಂದಿಯನ್ನು ಆಯಾ ಮತಗಟ್ಟೆಗಳಿಗೆ ತಲುಪಿಸಲು 405 ಕೆಎಸ್‌ಆರ್‌ಟಿಸಿ ಬಸ್ಸುಗಳು, 114 ಜೀಪ್‌ಗಳು ಮತ್ತು 95 ಮಿನಿ ಬಸ್ಸು ಗಳನ್ನು ಬಳಸಲಾಗುತ್ತದೆ. ಈ ವಾಹನ ಗಳು ಸಂಬಂಧಿಸಿದ ಮಸ್ಟರಿಂಗ್‌ ಕೇಂದ್ರಗಳಿಂದ ಏ.17 ರಂದು ಬೆಳಿಗ್ಗೆ 6 ರಿಂದ ಹೊರಡಲಿವೆ ಎಂದು ವಿವರಿಸಿ ದರು.

ವಿದ್ಯುನ್ಮಾನ ಮತಯಂತ್ರಗಳನ್ನು ಪರಿಶೀಲನೆ ನಡೆಸಿ ಸಿದ್ಧವಾಗಿಡಲಾಗಿದೆ. 5,084 ಬ್ಯಾಲೆಟ್‌ ಯೂನಿಟ್‌, 2,671 ಕಂಟ್ರೋಲ್‌ ಯೂನಿಟ್‌ ಮತ್ತು 2,717 ವಿವಿಪ್ಯಾಟ್‌ ಯಂತ್ರಗಳನ್ನು ಬಳಸ ಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ ಗಟ್ಟೆ ಸ್ಥಳದಿಂದ ಕನಿಷ್ಠ 200 ಮೀ. ದೂರದಲ್ಲಿ ತಮ್ಮ ಬೂತ್‌ ಸ್ಥಾಪಿಸಲು ಅವಕಾಶವಿದೆ. ಆದರೆ ಯಾವುದೇ ರೀತಿಯ ಪ್ರಚಾರವನ್ನು ಮಾಡುವಂತಿಲ್ಲ. ಎಲ್ಲ ಅಭ್ಯರ್ಥಿಗಳಿಗೆ ಮತಗಟ್ಟೆಗೆ ಒಬ್ಬರಂತೆ ಪೋಲಿಂಗ್‌ ಏಜೆಂಟ್‌ಅನ್ನು ನೇಮಿಸಬಹುದು ಎಂದು ತಿಳಿಸಿದರು.

ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ನೀಡಿರುವ ಮತದಾರರ ಗುರುತಿನ ಚೀಟಿ ಯಲ್ಲಿ ಮತಗಟ್ಟೆಯ ವಿಳಾಸ ತಪ್ಪಾಗಿ ಮುದ್ರಿತವಾಗಿದೆ. ಆದ್ದರಿಂದ ತಪ್ಪನ್ನು ಸರಿಪಡಿಸಿ ಹೊಸದಾಗಿ ಮುದ್ರಿಸಿದ ಗುರುತಿನ ಚೀಟಿ ನೀಡಲಾಗಿದೆ ಎಂದರು.

ಮದ್ಯಪಾನ ನಿಷೇಧ: ಏ.16 ರಂದು ಸಂಜೆ 6 ರಿಂದ ಏ.18ರ ಮಧ್ಯರಾತ್ರಿ ಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಏ.23 ರಂದು ಕೇರಳದಲ್ಲಿ ಮತದಾನ ನಡೆಯಲಿರುವುದರಿಂದ ಕೇರಳದ ಗಡಿಯಿಂದ ಮೈಸೂರು ಜಿಲ್ಲೆಯ 5 ಕಿ.ಮೀ ವ್ಯಾಪ್ತಿಯವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 24 ಸಖಿ ಮತಗಟ್ಟೆಗಳು, 11 ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಂಗವಿಕಲರು ಮತ್ತು ಹಿರಿಯ ನಾಗರಿಕರು ಮತಗಟ್ಟೆಗೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.

ನಗರ ಪೊಲೀಸ್‌ ಕಮಿಷನರ್‌ ಕೆ.ಟಿ.ಬಾಲಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !