ಶುಕ್ರವಾರ, ಮಾರ್ಚ್ 5, 2021
30 °C

ಶಾಸಕ ಮಂಜುನಾಥ್‌ಗೆ ತಿರುಗೇಟು ನೀಡಿದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೆಡಿಪಿ ಸಭೆಯಲ್ಲಿ ನೀಡಿದ ಹೇಳಿಕೆಯು ಶೋಭೆ ತರುವಂತದ್ದು ಅಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಎಚ್.ಪಿ.ಮಂಜುನಾಥ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಂಜುನಾಥ್ ಅವರಿಗೆ ಪತ್ರ ಬರೆದಿರುವ ರೋಹಿಣಿ ಸಿಂಧೂರಿ, ‘ಸಭೆಯಲ್ಲಿ ನೀಡಿದ ಹೇಳಿಕೆಯು ವಾಸ್ತವಾಂಶದಿಂದ ಕೂಡಿರದ ಹಾಗೂ ಮಾಹಿತಿ ಪಡೆದುಕೊಳ್ಳದೇ ನೀಡಿದ ಹೇಳಿಕೆಗಳಾಗಿವೆ. ಇನ್ನು ಮುಂದೆ ಹೇಳಿಕೆಗಳನ್ನು ನೀಡುವಾಗ ವಾಸ್ತವಾಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದ್ದಾರೆ.

ದಸರಾ ಉನ್ನತ ಮಟ್ಟದ ಸಮಿತಿ ಸೂಚಿಸಿದಂತೆ ಗಜಪಯಣವನ್ನು ಜನಪ್ರತಿನಿಧಿಗಳಿಗೆ ಆಹ್ವಾನ ನೀಡದೇ ಅಧಿಕಾರಿಗಳು ಮಾತ್ರವೇ ಸರಳವಾಗಿ ನಡೆಸಿದ್ದಾರೆ. ಇದರಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ. ಹುಣಸೂರು ತಾಲ್ಲೂಕು ಆಸ್ಪತ್ರೆ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಇದುವರೆಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಯಾವುದೇ ಪತ್ರ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.‌

ಕೇರ್ಗಳ್ಳಿ ಗ್ರಾಮದ ಹಲವು ಪ್ರದೇಶಗಳ ಭೂಪರಿವರ್ತನೆ ಕುರಿತು ನೀಡಿರುವ ಅರ್ಜಿಗಳು ಮಾತ್ರವೇ ಬಾಕಿ ಉಳಿದಿದ್ದು, ಅವುಗಳ ಕುರಿತು ಕಾನೂನಿನ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು