ಬುಧವಾರ, ಸೆಪ್ಟೆಂಬರ್ 22, 2021
23 °C

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಚೇರಿ 3 ದಿನ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಇಲ್ಲಿನ ಜಿಲ್ಲಾ ಪತ್ರಕರ್ತ ಸಂಘದ ಕಚೇರಿಯನ್ನು ಮಂಗಳವಾರದಿಂದ 3 ದಿನಗಳ ಮಟ್ಟಿಗೆ ಸೀಲ್‌ಡೌನ್‌ ಮಾಡಲಾಗಿದೆ.

ಜುಲೈ 30ರಂದು ಸಿದ್ದರಾಮಯ್ಯ ಇಲ್ಲಿ ಮಾಧ್ಯಮ ಸಂವಾದ ನಡೆಸಿದ್ದರು. ಈ ವೇಳೆ ಭಾಗಿಯಾಗಿದ್ದ ಎಲ್ಲ ಪತ್ರಕರ್ತರ ಗಂಟಲುದ್ರವವನ್ನು ಆಗಸ್ಟ್ 5ರಂದು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಸಂಘದಲ್ಲಿ ಪೂರ್ವನಿಗದಿಯಾಗಿದ್ದ ಎಲ್ಲ ಸುದ್ದಿಗೋಷ್ಠಿಗಳನ್ನೂ ರದ್ದುಪಡಿಸಲಾಗಿದೆ.

ಸಿದ್ದರಾಮಯ್ಯ ಅವರ ಇಲ್ಲಿನ ನಿವಾಸವನ್ನೂ ಸೀಲ್‌ಡೌನ್‌ ಮಾಡಲಾಗಿದೆ. ಇವರ ನಿಕಟ ಸಂಪರ್ಕಕ್ಕೆ ಬಂದವರಿಗೆ ಪರೀಕ್ಷೆಗೆ ಒಳಗಾಗಲು ಸೂಚಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು