ಭಾನುವಾರ, ಸೆಪ್ಟೆಂಬರ್ 25, 2022
30 °C

ಜಿಲ್ಲಾ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವ ಸೆ.17ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲಾ ವಿಶ್ವಕರ್ಮ 7ನೇ ಜಯಂತ್ಯುತ್ಸವ ಸಮಿತಿಯಿಂದ ವಿಶ್ವಕರ್ಮ ಜಯಂತ್ಯುತ್ಸವವನ್ನು ಸೆ.17ರಂದು ಮಧ್ಯಾಹ್ನ 12.30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಎಂ.ಮೊಗಣ್ಣಾಚಾರ್‌ ತಿಳಿಸಿದರು.

‘ಅಂದು ಬೆಳಿಗ್ಗೆ 9.30ಕ್ಕೆ ಇರ್ವಿನ್‌ ರಸ್ತೆಯ ಕಾಳಿಕಾಂಬಾ ಕಮಠೇಶ್ವರ ದೇವಾಲಯದಲ್ಲಿ ವಿಶ್ವಕರ್ಮ ಪುತ್ಥಳಿಗೆ ಪೂಜೆ ಸಲ್ಲಿಸಿ ಬೆಳ್ಳಿರಥದಲ್ಲಿ ಮೆರವಣಿಗೆ ನಡೆಸಲಾಗುವುದು. ಕಲಾ ತಂಡಗಳೊಂದಿಗೆ ಸಾಗುವ ಮೆರವಣಿಗೆಯು ಅಶೋಕ ರಸ್ತೆ–ಕೆ.ಆರ್.ವೃತ್ತ–ದೇವರಾಜ ಅರಸು ರಸ್ತೆ ಮಾರ್ಗವಾಗಿ ಕಲಾಮಂದಿರವನ್ನು ತಲುಪಲಿದೆ’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಉದ್ಘಾಟಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ವಿಶ್ವಕರ್ಮ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜನಪ್ರತಿನಿಧಿಗಳು ಮತ್ತು ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ವಿಶ್ವಕರ್ಮ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ವಿಶೇಷ ಉಪನ್ಯಾಸ ನೀಡಲಿದ್ದಾರೆ’ ಎಂದರು.

ಸಮಿತಿಯ ಪದಾಧಿಕಾರಿಗಳಾದ ಸೋಮಸುಂದರ ಮೂರ್ತಿ, ಜಯಶಂಕರ್‌, ಪ್ರಮೀಳಾ ಆಚಾರ್, ಸಿದ್ದಪ್ಪಚಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.