ಮಂಗಳವಾರ, ಅಕ್ಟೋಬರ್ 27, 2020
21 °C
ಸೇಡಿನ ರಾಜಕಾರಣ: ಧ್ರುವನಾರಾಯಣ ಟೀಕೆ

ಸಿಬಿಐ ದಾಳಿ ಪೂರ್ವನಿಯೋಜಿತ: ಧ್ರುವನಾರಾಯಣ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ಸಿಬಿಐ ದಾಳಿ ಪೂರ್ವನಿಯೋಜಿತ. ಇದು ಬಿಜೆಪಿಯ ಸೇಡಿನ ರಾಜಕಾರಣದ ಭಾಗ ಎಂದು ಕಾಂಗ್ರೆಸ್‌ ಮುಖಂಡ ಆರ್‌.ಧ್ರುವನಾರಾಯಣ ಟೀಕಿಸಿದರು.

ಸ್ವಾಯತ್ತ ಸಂಸ್ಥೆಯಾಗಿದ್ದ ಸಿಬಿಐ ಬಿಜೆಪಿ ಆಡಳಿತದಲ್ಲಿ ಕಮ್ಯೂನಲ್ ಇನ್ವೆಸ್ಟಿಗೇಷನ್ ಬ್ಯೂರೊ ಆಗಿದೆ. ಬಿಜೆಪಿಯ ಏಜೆಂಟ್‌ ಆಗಿ ಕೆಲಸ ಮಾಡುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿಕೆಶಿ ಅವರು ಪಕ್ಷವನ್ನು ಸಂಘಟಿಸುತ್ತಿರುವ ರೀತಿಯನ್ನು ನೋಡಿ ಬಿಜೆಪಿಗೆ ನಡುಕ ಶುರುವಾಗಿದೆ. ಇದರಿಂದ ಅವರನ್ನು ಟಾರ್ಗೆಟ್‌ ಮಾಡಿದೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ಪದೇ ಪದೇ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದು ಅರಿತಿರುವ ಬಿಜೆಪಿ ಅಡ್ಡದಾರಿ ಹಿಡಿದಿದೆ. ಡಿಕೆಶಿ ಅವರು ಹೆಣೆಯುತ್ತಿರುವ ತಂತ್ರಗಳಿಗೆ ಬಿಜೆಪಿ ಬೆದರಿದೆ. ಈ ಕಾರಣಕ್ಕಾಗಿಯೇ ಸಿಬಿಐ ಮೂಲಕ ದಾಳಿ ನಡೆಸಿದೆ. ಈ ಸೇಡಿನ ಬೆಂಕಿ ಮುಂದೊಂದು ದಿನ ಬಿಜೆಪಿಯನ್ನೇ ಸುಡಲಿದೆ ಎಂದು ಹರಿಹಾಯ್ದರು.

ಇಂತಹ ದಾಳಿಗಳಿಗೆ ಅವರು ಹೆದರುವುದಿಲ್ಲ. ತನಿಖೆಯಾದ ಬಳಿಕ ಪರಿಶುದ್ಧರಾಗಿಯೇ ಆಚೆ ಬರ್ತಾರೆ. ಆದರೆ ಚುನಾವಣೆ ಸಂದರ್ಭದಲ್ಲಿ ಏಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡ ವಾಸು, ಕಾಂಗ್ರೆಸ್‌ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶಿವಣ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು