ಸೋಮವಾರ, ಸೆಪ್ಟೆಂಬರ್ 27, 2021
23 °C

ಹುಣಸೂರು; ಮನೆಗೆ ನುಗ್ಗಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸೂರು: ನಗರದ ನ್ಯೂ ಪೋಸ್ಟ್ ಆಫೀಸ್ ರಸ್ತೆಯ ನಿವಾಸಿ ಮುಮ್ತಾಜ್ ಆಹಮ್ಮದ್ ಅವರ ನಿವಾಸಕ್ಕೆ ಸೋಮವಾರ ರಾತ್ರಿ 5 ಮಂದಿ ದರೋಡೆಕೋರರು ನುಗ್ಗಿ ಹಲ್ಲೆ ನಡೆಸಿ ಹಣ ದೋಚಿ ಪರಾರಿಯಾಗಿದ್ದಾರೆ.

ರಾತ್ರಿ 8 ಗಂಟೆಯ ಆಸುಪಾಸಿನಲ್ಲಿ ವೈದ್ಯರ ವಿಳಾಸ ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಐವರು ಮುಮ್ತಾಜ್ ಅಹಮದ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿದ್ದ ಮಹಿಳೆಯರನ್ನು ಹಗ್ಗದಿಂದ ಕಟ್ಟಿ ಹಾಕಿ, ಥಳಿಸಿದ್ದಾರೆ.

ಜಮೀನು ಮಾರಾಟ ಮಾಡಿದ ಹಣ ಮತ್ತು ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಕನ್ನಡದಲ್ಲಿ ಸ್ಥಳೀಯ ಶೈಲಿಯಲ್ಲೇ ಮಾತನಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಮತ್ತು ನಗರ ಠಾಣೆ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.