ಗುರುವಾರ , ಏಪ್ರಿಲ್ 9, 2020
19 °C

ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ತೆಗೆದ ವೈದ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಮಗುವಿನ ಗಂಟಲಿನಲ್ಲಿ ಸಿಕ್ಕಿಕೊಂಡಿದ್ದ ‘ಮೆಂಥೋ ಪ್ಲಸ್‌’ ಡಬ್ಬಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸೋಮವಾರ ಯಶಸ್ವಿಯಾಗಿ ಹೊರ ತೆಗೆದರು.

ತಾಲ್ಲೂಕಿನ ಕೆಆರ್‌ಎಸ್‌ ಗ್ರಾಮದ ಶಿವಕುಮಾರ್‌ ಮತ್ತು ಚಂದ್ರಕಲಾ ದಂಪತಿಯ ಒಂದೂವರೆ ವರ್ಷದ ಹೆಣ್ಣು ಮಗು ಚಾರ್ವಿ ಆಟ ಆಡುವಾಗ ಡಬ್ಬಿ ನುಂಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಪೋಷಕರಿಗೆ ಈ ವಿಚಾರ ಗೊತ್ತಾಗಿದೆ.

ಸರ್ಜನ್‌ ಡಾ.ಮಹೇಶ್‌, ಅನಸ್ತೇಷಿಯಾ ತಜ್ಞ ಡಾ.ರಾಜು ಮತ್ತು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಅವರನ್ನು ಒಳಗೊಂಡ ತಂಡ ಶಸ್ತ್ರಚಿಕಿತ್ಸೆ ನಡೆಸದೇ ಅರ್ಧ ತಾಸಿನಲ್ಲಿ ಡಬ್ಬಿಯನ್ನು ಹೊರಗೆ ತೆಗೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)