ಶುಕ್ರವಾರ, ಅಕ್ಟೋಬರ್ 7, 2022
24 °C

ವೈದ್ಯರು ಕ್ರಿಯಾಶೀಲರಾಗಿರಲು ಕ್ರೀಡೆ ಅಗತ್ಯ: ಡಾ.ಸಿ.ಎನ್.ಮಂಜುನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ವೈದ್ಯರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕಾದರೆ ಕ್ರೀಡೆ ಅಗತ್ಯವಾಗಿದೆ’ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ನಗರದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸ್ತುತ ದಿನಗಳಲ್ಲಿ ಜನರಿಗೆ ತಾಳ್ಮೆ ಕಡಿಮೆಯಾಗಿದೆ. ಎಲ್ಲವೂ ತಕ್ಷಣದಲ್ಲೇ ಆಗಬೇಕು ಎನ್ನುತ್ತಾರೆ. ವೈದ್ಯರ ಮೇಲೆ ಒತ್ತಡ ತರುತ್ತಾರೆ. ಹಲ್ಲೆ ಮಾಡಲು ಮುಂದಾಗುತ್ತಾರೆ. ಈ ಎಲ್ಲ ಒತ್ತಡಗಳಿಂದ ವೈದ್ಯರ ಆಯಸ್ಸು ಕಡಿಮೆಯಾಗುತ್ತಿದೆ’ ಎಂದು ಕಳವಳ ವ್ಯಕ್ತ‍ಪಡಿಸಿದರು. ‘ಜನರ ಮನಸ್ಥಿತಿ ಬದಲಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

‘ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ತಜ್ಞ ವೈದ್ಯರು, ತಂತ್ರಜ್ಞರು ಹಾಗೂ ನರ್ಸ್‌ಗಳನ್ನು ನಿಯೋಜಿಸಬೇಕು. ಹೊಸ ಆಸ್ಪತ್ರೆಗಳನ್ನು ಕಟ್ಟುವಾಗಲೇ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಬೇಕು. ಆಗ ಜಿಲ್ಲಾ ಆಸ್ಪತ್ರೆಗಳ ಮೇಲೆ ಒತ್ತಡ ಕಡಿಮೆಯಾಗುತ್ತದೆ’ ಎಂದರು.

ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ನಿರ್ದೇಶಕಿ ಡಾ.ಕೆ.ಆರ್.ದಾಕ್ಷಾಯಿಣಿ, ಡಾ.ಹರ್ಷ ಬಸಪ್ಪ, ಡಾ.ಜಯಪ್ರಕಾಶ್, ಡಾ.ರಾಜೀತ್, ಡಾ.ವೀಣಾ ನಂಜಪ್ಪ, ಡಾ.ಕೆ.ಎಸ್.ಸದಾನಂದ್, ಡಾ.ದೇವರಾಜ್, ಡಾ.ದಿನೇಶ್, ಡಾ.ಹೇಮಾರವೀಶ್, ಆರ್‌ಎಂಇ ಡಾ.ಪಶುಪತಿ, ನರ್ಸಿಂಗ್ ಸೂಪರಿಂಟೆಂಡೆಂಟ್ ಹರೀಶ್ ಕುಮಾರ್, ಪಿಆರ್‌ಒ ವಾಣಿ ಮೋಹನ್, ಎಂಜಿನಿಯರ್‌ಗಳಾದ ಸ್ವರೂಪ್, ವಿಜಯ್, ಸಂದೀಪ್, ಪುನೀತ್, ಸೈಯದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು