ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸದಂತೆ ಪತ್ರ

ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಮಂಜುಳಾ ಮಾನಸ ಒತ್ತಾಯ
Last Updated 12 ಡಿಸೆಂಬರ್ 2019, 14:30 IST
ಅಕ್ಷರ ಗಾತ್ರ

ಮೈಸೂರು: ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮೇಲ್ ಮೂಲಕ ಪತ್ರ ಬರೆಯಲಾಗಿದೆ. ಈ ಕುರಿತು ಚರ್ಚೆ ನಡೆಸುವುದಾಗಿ ವೇಣುಗೋಪಾಲ್ ಅವರಿಂದ ಸಂದೇಶ ಬಂದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.‌

ಉಪಚುನಾವಣೆ ಸೋಲಿಗೆ ಈ ಇಬ್ಬರು ನಾಯಕರು ಕಾರಣರಲ್ಲ. ಬದಲಿಗೆ, ಚೆಕ್‌ಪೋಸ್ಟ್‌ಗಳಲ್ಲಿ ಬಿಗಿಯಾದ ತಪಾಸಣೆ ನಡೆಯದೇ ಹೋಗಿದ್ದು, ನೀತಿಸಂಹಿತೆ ಉಲ್ಲಂಘನೆಯ ದೂರುಗಳನ್ನು ಚುನಾವಣಾ ಆಯೋಗ ಪರಿಗಣಿಸದೇ ಹೋಗಿದ್ದು, ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಜೆಡಿಎಸ್‌ ಜತೆ ಸರ್ಕಾರ ರಚನೆ ಎಂಬ ಮಾತುಗಳು ಹಾಗೂ ಕೆಲವು ಕಾಂಗ್ರೆಸ್ ನಾಯಕರು ಸರಿಯಾಗಿ ಪ್ರಚಾರದಲ್ಲಿ ತೊಡಗಿಕೊಳ್ಳದೇ ಹೋಗಿದ್ದೇ ಕಾರಣ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮಾಧ್ಯಮಗಳು ಅಭಿವ್ಯಕ್ತಿಸುತ್ತಿಲ್ಲ ಎಂದು ಅವರು ಇದೇ ವೇಳೆ ಹರಿಹಾಯ್ದರು.

ಕೆಪಿಸಿಸಿ ವಕ್ತಾರರಾದ ಮಂಜುಳಾ ಮಾನಸ ಮಾತನಾಡಿ, ‘ಒಂದು ವೇಳೆ ಸಿದ್ದರಾಮಯ್ಯ ಅವರನ್ನು ‘ಸೈಡ್‌ಲೈನ್’ ಮಾಡಿದರೆ, ಗುಜರಾತ್ ಹಾಗೂ ಉತ್ತರಪ್ರದೇಶದಲ್ಲಿನ ಕಾಂಗ್ರೆಸ್‌ನಂತೆ ಇಲ್ಲೂ ಆಗುತ್ತದೆ’ ಎಂದು ಎಚ್ಚರಿಕೆ ನೀಡಿದರು.‌

ಯಾವುದೇ ಕಾರಣಕ್ಕೂ ಇವರಿಬ್ಬರ ರಾಜೀನಾಮೆಯನ್ನು ಅಂಗೀಕರಿಸಬಾರದು. ಸಿದ್ದರಾಮಯ್ಯ ಅವರನ್ನು ‘ಸೈಡ್‌ಲೈನ್‌’ ಮಾಡಬಾರದು ಎಂದು ಅವರು ಒತ್ತಾಯಿಸಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT