ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

ಅ.17ರಂದು ಚಾಮುಂಡಿಬೆಟ್ಟದಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ಅವರು ಚಾಲನೆ ನೀಡಲಿದ್ದಾರೆ.

ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಇಲ್ಲಿ ಪ್ರಕಟಿಸಿದರು.ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈ ಆಯ್ಕೆ ಮಾಡಲಾಗಿದೆ.

ಮೈಸೂರಿನ ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೊಲೀಸ್ ಕಾನ್ಸ್ ಟೆಬಲ್ ಪಿ.ಕುಮಾರ್, ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆ ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನ ಅನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ... ಕೊರೊನಾ ವಾರಿಯರ್ಗಳಿಗೆ ಸಂದ ಗೌರವ: ಡಾ.ಮಂಜುನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.