ಗುರುವಾರ , ಆಗಸ್ಟ್ 11, 2022
21 °C
ಮುಂದುವರಿದ ಒಳಚರಂಡಿ ಕಾರ್ಮಿಕರ ಪ್ರತಿಭಟನೆ, ಎರಡೇ ದಿನಕ್ಕೆ ಬಂದಿದ್ದು 80 ದೂರು

ನಾಗರಿಕರನ್ನು ಕಾಡುತ್ತಿರುವ ಒಳಚರಂಡಿ ಸಮಸ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಒಳ ಚರಂಡಿ ಕಾರ್ಮಿಕರು ಇಲ್ಲಿನ ಪಾಲಿಕೆಯ ಮುಂಭಾಗ ಕಾಯಂಗೊಳಿಸಲು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಎರಡೇ ದಿನಕ್ಕೆ ಪಾಲಿಕೆಯಲ್ಲಿ ಒಳಚರಂಡಿಗೆ ಸಂಬಂಧಿಸಿದ 80ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದು, ಅವು ವಿಲೇವಾರಿ ಆಗಿಲ್ಲ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.

ಮುಖ್ಯವಾಗಿ, ಉದಯಗಿರಿ ಭಾಗದಲ್ಲೇ ಹೆಚ್ಚು ದೂರುಗಳು ಬಂದಿವೆ. ಇವುಗಳನ್ನು ಸರಿಪಡಿಸುವ ಒಳ ಚರಂಡಿ ಕಾರ್ಮಿಕರು ಧರಣಿ ಕುಳಿತಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ನಗರ ಗಬ್ಬೆದ್ದು ನಾರಲಿದೆ.‌

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಪ್ರತಿಭಟನೆ ಸ್ಥಳಕ್ಕೆ ಡಿ.16ರಂದು ಬೆಳಿಗ್ಗೆ 10.30ಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮೈಸೂರು ಮಹಾನಗರ ಪಾಲಿಕೆ ಒಳಚರಂಡಿ ಸಹಾಯಕರು ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಳನಿ, ‘ನಮ್ಮಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ನಾವು ಭಾನುವಾರದವರೆಗೆ ಎಲ್ಲ ದೂರುಗಳನ್ನು ವಿಲೇವಾರಿ ಮಾಡಿ ಪ್ರತಿಭಟನೆಗೆ ಕುಳಿತಿದ್ದೇವೆ. ಇನ್ನಾದರೂ ನಮ್ಮನ್ನು ಕಾಯಂಗೊಳಿಸಬೇಕು’ ಎಂದು ಮನವಿ ಮಾಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು