ಗುರುವಾರ , ಡಿಸೆಂಬರ್ 5, 2019
20 °C

ಶಿಕ್ಷಣ ಇಲಾಖೆ ಸುತ್ತೋಲೆ: ನ್ಯಾಯಾಂಗ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನೂ ಕೇಸರೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ ಮಾಜಿ ಸಂಸದ ಆರ್‌. ಧ್ರುವನಾರಾಯಣ, ಸಂವಿಧಾನ ದಿನ ಆಚರಣೆಗೆ ಸಂಬಂಧಿಸಿದಂತೆ ಇಲಾಖೆಯು ಹೊರಡಿಸಿದ ಸುತ್ತೋಲೆ ವಿಷಯವಾಗಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಗುರುವಾರ ಇಲ್ಲಿ ಆಗ್ರಹಿಸಿದರು.

‘ಬಿಜೆಪಿಯಿಂದ ಅಂಬೇಡ್ಕರ್‌ಗೆ ಅಪಮಾನ ಆಗುವುದು ಮುಂದುವರಿದಿದೆ. ಇದರಲ್ಲಿ ಮನುವಾದಿಗಳ ಕೈವಾಡದ ಶಂಕೆ ಇದೆ. ಶಿಕ್ಷಣ ಸಚಿವ ಸುರೇಶ್‌ಕುಮಾರ್ ಈ ವಿಷಯದಲ್ಲಿ ಸ್ಪಷ್ಟನೆ ನೀಡಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಆದರೆ, ಸತ್ಯಾಂಶ ಹೊರಬರಬೇಕು ಎಂದರೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಕೇಂದ್ರದ ಯುಪಿಎ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ರಾಜೀವ್‌ಗಾಂಧಿ ನ್ಯಾಷನಲ್ ಫೆಲೊಶಿಪ್ ಅನ್ನು ಈಗಿನ ಎನ್‌ಡಿಎ ಸರ್ಕಾರ ಸ್ಥಗಿತಗೊಳಿಸಿದೆ. ಇದು ತಳಸಮುದಾಯದ ಮೇಲೆ ನಡೆಸಿದ ಗದಾಪ್ರಹಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)