ಶನಿವಾರ, ಮೇ 28, 2022
30 °C

ಮೈಸೂರು: ಸೋಮವಾರದಿಂದ ಶಾಲೆಗಳು ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಜ.24 ರಿಂದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಶನಿವಾರ ಆದೇಶ ಹೊರಡಿಸಿದ್ದು, ‘ತಾಲ್ಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಶಾಲೆಗಳಲ್ಲಿ ಸೋಮವಾರದಿಂದ (ಜ.24) 1 ರಿಂದ 9ನೇ ತರಗತಿಯವರೆಗೆ ಎಂದಿನಂತೆ ಭೌತಿಕ ತರಗತಿಗಳು ನಡೆಯಲಿವೆ’ ಎಂದು ತಿಳಿಸಿದ್ದಾರೆ.

ಮಕ್ಕಳಲ್ಲಿ ಕೋವಿಡ್‌ ಸೋಂಕು ಹರಡುವುದನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಮೈಸೂರು ತಾ‌ಲ್ಲೂಕಿನಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನು ಜ.12 ರಿಂದ ಬಂದ್‌ ಮಾಡಲಾಗಿತ್ತು. ಆನ್‌ಲೈನ್‌ ತರಗತಿಗಳು ಮಾತ್ರ ನಡೆಯುತ್ತಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು