ಶುಕ್ರವಾರ, ಜುಲೈ 1, 2022
25 °C

ಆನೆಯತ್ತ ಗುಂಡು; ಸಿಬ್ಬಂದಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಇಲ್ಲಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ಯಡಿಯಾಲ ವಲಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ರಹೀಂ ಎಂಬುವವರು ಬೆನ್ನತ್ತಿ ಬರುತ್ತಿದ್ದ ಒಂಟಿ ಸಲಗದತ್ತ ಗುಂಡು ಹಾರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸದ್ಯ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಸೇವೆಯಿಂದ ವಜಾ ಮಾಡಿದ್ದು, ವಿಡಿಯೊ ಮಾಡಿದ ಉಮೇಶ್‌ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಬಂಡೀಪುರ ಹುಲಿ ರಕ್ಷಿತಾರಣ್ಯದ ನಿರ್ದೇಶಕ ಟಿ.ಬಾಲಚಂದ್ರ ತಿಳಿಸಿದ್ದಾರೆ.

ರೈಲ್ವೆಹಳಿ ಬೇಲಿ ಇದ್ದರೂ ಆನೆಯ ಮುಖದತ್ತ ಬಂದೂಕು ಇಟ್ಟು ಗುಂಡು ಹಾರಿಸಿದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಆದರೆ, ಆನೆಯು ರೈಲ್ವೆ ಹಳಿ ಬ್ಯಾರಿಕೇಡ್ ದಾಟಲು ಯತ್ನಿಸುತ್ತಿತ್ತು. ಚಲಿಸುತ್ತಿದ್ದ ಜೀಪ್‌ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವಾಗ ಆಯತಪ್ಪಿ ಅದು ಆನೆಯತ್ತ ಹಾರಿದೆ. ಆದರೆ, ಗುಂಡು ಆನೆಗೆ ತಗುಲಿಲ್ಲ ಎಂದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು