ಒಂಟಿ ಸಲಗಕ್ಕೆ ಹೆದರಿ ಹಿಮ್ಮುಖವಾಗಿ ಬಸ್ ಚಲಾಯಿಸಿದ ಚಾಲಕ

ಬುಧವಾರ, ಜೂನ್ 19, 2019
25 °C

ಒಂಟಿ ಸಲಗಕ್ಕೆ ಹೆದರಿ ಹಿಮ್ಮುಖವಾಗಿ ಬಸ್ ಚಲಾಯಿಸಿದ ಚಾಲಕ

Published:
Updated:
Prajavani

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ– ಕರ್ನಾಟಕ ಗಡಿ ಭಾಗದ ರಸ್ತೆಯಲ್ಲಿ ಕಾಣಿಸಿಕೊಂಡ ಒಂಟಿ ಸಲಗಕ್ಕೆ ಹೆದರಿದ ಚಾಲಕ ಹಿಮ್ಮುಖವಾಗಿ ಬಸ್‌ ಚಾಲನೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆನೆಯು ಬಸ್‌ ಸಮೀಪಕ್ಕೆ ಬರುತ್ತಿದ್ದಂತೆ ಪ್ರಯಾಣಿಕರು ಕಿರುಚಾಡಿದ್ದಾರೆ. ಸುಮಾರು ಅರ್ಧ ಕಿ.ಮೀ. ನಂತರ ಆನೆಯು ಕಾಡಿನತ್ತ ಹೆಜ್ಜೆ ಹಾಕಿದೆ.

ಘಟನೆ ಯಾವಾಗ ನಡೆದಿದೆ ಎಂಬುದು ಖಚಿತವಾಗಿಲ್ಲ. ಆದರೆ, ನೋಂದಣಿ ಸಂಖ್ಯೆಯಿಂದ ಬಸ್‌ ಕೇರಳಕ್ಕೆ ಸೇರಿದ್ದು ಎಂಬುದು ಗೊತ್ತಾಗಿದೆ. ಕಳೆದ ವಾರವೂ ಒಂಟಿ ಸಲಗವೊಂದು ಇದೇ ರಸ್ತೆಯಲ್ಲಿ ಕಾಣಿಸಿಕೊಂಡು ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿತ್ತು.

ಸೆರೆಯಾದ ಚಿರತೆಗಳ ಕಾಳಗ:‌ ಎರಡು ಚಿರತೆಗಳು ಮರವೊಂದರ ಮೇಲೆ ಜಗಳವಾಡುತ್ತಿರುವ ವಿಡಿಯೊ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಒಂದು ಕಪ್ಪು ಚಿರತೆಯೂ ಸೇರಿದೆ.

ನಾಗರಹೊಳೆ ದಮ್ಮನಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕಪ್ಪು ಚಿರತೆಗೆ ಗಾಯವಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !