ಬುಧವಾರ, ಸೆಪ್ಟೆಂಬರ್ 22, 2021
23 °C

ನುಗು: ಹೆಣ್ಣಾನೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಎಚ್.ಡಿ.ಕೋಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ, ನುಗು ವನ್ಯಜೀವಿ ವಲಯದಲ್ಲಿನ ನುಗು ಜಲಾಶಯದ ಹಿನ್ನೀರಿನ ಬಳಿ ಹೆಣ್ಣಾನೆಯೊಂದು (35) ಅನುಮಾನಾಸ್ಪದವಾಗಿ ಮೃತಪಟ್ಟಿದೆ.

ಮುತ್ತಿಗೆಹುಂಡಿ ಸಮೀಪದ ನುಗು ಹಿನ್ನೀರಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸೋಮವಾರ ಆನೆಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಆನೆಯ ಹೊಟ್ಟೆ ಊದಿಕೊಂಡಿದ್ದು, ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು