ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಇಂದಿನಿಂದ: ನಿಷೇಧಾಜ್ಞೆ ಜಾರಿ

Last Updated 6 ಜುಲೈ 2020, 16:53 IST
ಅಕ್ಷರ ಗಾತ್ರ

ಮೈಸೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಜುಲೈ 7ರ ಮಂಗಳವಾರದಿಂದ ಮೈಸೂರು ನಗರದ 6 ಕೇಂದ್ರಗಳಲ್ಲಿ ನಡೆಯಲಿದ್ದು, ಈ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಕುವೆಂಪು ನಗರದ ಜ್ಞಾನಗಂಗಾ ಪ್ರೌಢಶಾಲೆ, ಜಯಲಕ್ಷ್ಮೀಪುರಂನ ಚಿನ್ಮಯ ಪ್ರೌಢಶಾಲೆ, ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಪ್ರೌಢಶಾಲೆ, ಸರಸ್ವತಿಪುರಂನ ವಿಜಯ ವಿಠ್ಠಲ ಪ್ರೌಢಶಾಲೆ ಹಾಗೂ ವಿ.ವಿ.ಮೊಹಲ್ಲಾದ ಸೆಂಟ್ ಫಿಲೋಮಿನಾ ಪ್ರೌಢಶಾಲೆಯಲ್ಲಿ ಮೌಲ್ಯ ಮಾಪನ ನಡೆಯಲಿದೆ.

ಕಲಂ 35ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT