ಮಂಗಳವಾರ, ಅಕ್ಟೋಬರ್ 27, 2020
21 °C

ಮೈಸೂರಿಗೆ ಇಂದು ತಜ್ಞರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರಿನಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ದಸರಾ ನಡೆಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಆರೋಗ್ಯ ಇಲಾಖೆಯ ತಾಂತ್ರಿಕ ತಜ್ಞರ ತಂಡ ಶುಕ್ರವಾರ ಬರಲಿದೆ.

ದಸರೆಗೆ ಕೈಗೊಂಡಿರುವ ಸಿದ್ಧತೆ, ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಬೇಕೇ, ಎಷ್ಟು ಜನರನ್ನು ಸೇರಿಸಬೇಕು ಹಾಗೂ ಕೋವಿಡ್‌ ನಿಯಂತ್ರಣ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಕಲೆಹಾಕಲಿದೆ.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್‌,ಸದಸ್ಯ ಡಾ.ಲೋಕೇಶ್‌, ಸದಸ್ಯ ಕಾರ್ಯದರ್ಶಿ ಡಾ.ಮಹಮ್ಮದ್‌
ಷರೀಫ್‌ ಅವರು ಅರಮನೆ, ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗೆ ವರದಿ ನೀಡಲಿದ್ದಾರೆ. ಅಲ್ಲದೇ, ಭದ್ರತಾ ತಂಡ ಕೂಡ ಬಂದು ಪರಿಶೀಲನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.