ಬುಧವಾರ, ಜೂನ್ 29, 2022
21 °C

ಮೈಸೂರು: ಫೇಸ್‌ಬುಕ್‌ ಮೂಲಕ ಪರಿಚಯವಾದ ಮಹಿಳೆಗೆ ಮಗು ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬೆಂಗಳೂರಿನ ಮಾರತ್‌ಹಳ್ಳಿಯ 26 ವರ್ಷ ವಯಸ್ಸಿನ ಮಹಿಳೆಯೊಬ್ಬರು ತನ್ನ 7 ತಿಂಗಳ ಗಂಡು ಮಗುವನ್ನು ಎಚ್.ಡಿ.ಕೋಟೆ ತಾಲ್ಲೂಕಿನ ಟೈಗರ್ ಬ್ಲಾಕ್‌ನ 36 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಮಾರಾಟ ಮಾಡಿದ್ದಾರೆ. ಈ ಕುರಿತು ಆಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿವಾಕರ್, ‘ಫೇಸ್‌ಬುಕ್‌ ಮೂಲಕ ಪರಿಚಯವಾದ ಎಚ್.ಡಿ.ಕೋಟೆ ತಾಲ್ಲೂಕಿನ 36 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಬೆಂಗಳೂರಿನ 26 ವರ್ಷ ವಯಸ್ಸಿನ ಮಹಿಳೆಯೊಬ್ಬರು ತನ್ನ 7 ತಿಂಗಳ ಗಂಡು ಮಗುವನ್ನು ₹ 1 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹಣ ಪಡೆದು ಮಗು ನೀಡಿದ ನಂತರ ಮಹಿಳೆ ಮತ್ತೆ ಮಗುವನ್ನು ಪಡೆದುಕೊಂಡಿದ್ದಾಳೆ. ಸ್ವಲ್ಪ ಸಮಯದ ನಂತರ  ಮಗು ಬೇಡ ಹಣ ಬೇಕು ಎಂದು ಮತ್ತೆ ಮಾರಾಟ ಮಾಡಿದ್ದಾರೆ. ಪ್ರಕರಣ ಗಮನಕ್ಕೆ ಬಂದಿದ್ದು, ಇಬ್ಬರ ವಿರುದ್ಧವೂ ಪೊಲೀಸರಿಗೆ ದೂರು ನೀಡಲಾಗುವುದು. ಸದ್ಯ, ಮಗು ಮಕ್ಕಳ ರಕ್ಷಣಾ ಘಟಕ ವಶದಲ್ಲಿದೆ’ ಎಂದು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು