ಶುಕ್ರವಾರ, ಮೇ 20, 2022
24 °C

ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಕಲಿ ನಂದಿನಿತುಪ್ಪ ತಯಾರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ನಂದಿನಿ ಹಾಲು ಮತ್ತು ಉಪ ಉತ್ಪನ್ನಗಳ ವಿಶ್ವಾಸಾರ್ಹತೆಗೆ ಈ ಪ್ರಕರಣದಿಂದ ಧಕ್ಕೆಯಾಗಿದೆ. ಇದು ರೈತರ ಮೇಲೂ ಪರಿಣಾಮ ಬೀರಲಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹಾಲು ಉತ್ಪಾದಕರ ಸಹಕಾರ ಸಂಘಗಳು ನಡೆಸುವ ಹಾಲು ಮಾರಾಟವನ್ನು ಮೈಮುಲ್ ನಿಷೇಧಿಸಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಇದರಿಂದ ಸಂಘಗಳು ಭಾರಿ ನಷ್ಟಕ್ಕೆ ತುತ್ತಾಗಲಿವೆ. ಹಾಗಾಗಿ ಹಾಲು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು