ಸೋಮವಾರ, ಜೂನ್ 1, 2020
27 °C

ಸುಳ್ಳು ಸುದ್ದಿ ಹರಡಿದವನ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಮೀನೊಂದರಲ್ಲಿ ಕೇರಳದಿಂದ ಕೆಲಸಗಾರರನ್ನು ಕರೆತಂದು ಕೆಲಸ ಮಾಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡಿದ ನಂಜನಗೂಡು ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಜಯಶಂಕರ್ (21) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈತ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಶುಂಠಿ ಬೇಸಾಯದ ಕೆಲಸಕ್ಕಾಗಿ ನೂರಾರು ಮಂದಿ ಕಾರ್ಮಿಕರನ್ನು ಕೇರಳದಿಂದ ಕರೆದುಕೊಂಡು ಬಂದಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಹಬ್ಬಿಸಿದ್ದ. ನಂತರ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಕೇರಳದಿಂದ ಕಾರ್ಮಿಕರು ಬಂದಿರಲಿಲ್ಲ ಎಂಬುದು ಗೊತ್ತಾಯಿತು.

ಸುಳ್ಳು ಸುದ್ದಿ ಹಬ್ಬಿಸಿದ ಜಯಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 505 (ಸಾರ್ವಜನಿಕರಲ್ಲಿ ಭೀತಿ ಅಥವಾ ಆತಂಕಕ್ಕೆ ಕಾರಣವಾಗಬಲ್ಲ ವಿಷಯಗಳು/ಗಾಳಿ ಸುದ್ದಿ ಹಬ್ಬುವುದು) ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 54ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು